ನವದೆಹಲಿ: NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆ ಟ್ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್ ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ.
ಮುದ್ರಾ ಲೋನ್ ಮಿತಿ ೧೦ ಲಕ್ಷದಿಂದ ೨೦ ಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.