ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಗೃಹ ಕಛೇರಿ ಕೃಷ್ಣದಲ್ಲಿ, ಇಂದು (ಸೋಮವಾರ) ಸಂಜೆ ಬಳ್ಳಾರಿ ಜಿಲ್ಲೆಯ ಐದು ಜನ ಶಾಸಕರೊಂದಿಗೆ ವಿಶೇಷ ಸಭೆ ನಡೆಸಲಾಯಿತು.
ಬಳ್ಳಾರಿ ಉಸ್ತುವಾರಿ ಸಚಿವ ನಾಗೇಂದ್ರ,ನಗರ ಶಾಸಕ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್,ಸಿರುಗುಪ್ಪ ನಾಗರಾಜ್,ಸಂಡೂರಿನ ಈ.ತುಕಾರಾಮ್, ಕಳೆದ ವಿಧಾನ ಸಭೆ ಚುನಾವಣೆಯಲ್ಲಿ, ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಪಂಚ ಪಾಂಡವರಂತೆ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ, ಜಿಲ್ಲೆಯ ಜನರು ಕೈ ಹಿಡಿದಿದ್ದು,
ಸರ್ಕಾರದ ಪಂಚ ಗ್ಯಾರಂಟಿ ಸೇರಿದಂತೆ ಸರ್ಕಾರದ ಯೋಜನೆಗಳ ಮೂಲಕ ಜಿಲ್ಲೆಯ ಪ್ರತಿಕ್ಷೇತ್ರಗಳ ಜನರ ಮನೆ ಮನೆಗೆ ತಲುಪಿಸುವ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ.ಶಿವಕುಮಾರ್.
ಐದು ಕ್ಷೇತ್ರಗಳಲ್ಲಿ ವಿಶೇಷ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದ್ದು, ಶಾಸಕರಿಗೆ, ಯೋಜನೆಗಳು ಮತ್ತು ಕಾರ್ಯವೈಕರಿ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಿದ್ದಾರೆ.
ಇನ್ನು ಇದೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ನಾಗೇಂದ್ರ, ಮೈಸೂರಿನ ಅರಮನೆ ಮಾದರಿಯ ವಿಶೇಷ ಉಡುಗರೆ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ, ಸಿಎಂ ಸಲಹೆಗಾರರಾದ ಗೋವಿಂದರಾಜು ಸೇರಿದಂತೆ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
