ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು,ಕಾರ್ಯಕರ್ತರು ಪಟ್ಟಣದ ಬಳಿಯ ಹಳೆ ಎಡತೊರೆಯ ಕಾವೇರಿ ನದಿ ದಡದಲ್ಲಿರುವ ಶ್ರೀ ಮೀನಾಕ್ಷಿ ಸಮೇತ ಅರ್ಕೇಶ್ವರ ದೇವಾಲಯದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು, – ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಾಲಯದ ಮುಂದೆ ಈಡುಗಾಯಿ ಒಡೆದು ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ, ಅವರ ಆರೋಗ್ಯ ಮೊದಲಿನಂತೆ ಸುಧಾರಣೆಯಾಗಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಮಾತನಾಡಿದ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ರಾಜ್ಯದಲ್ಲಿ ಮಾದರಿ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಅವರ ಕಾರ್ಯವೈಖರಿಯನ್ನು ಈಗಲೂ ನಾಡಿನ ಜನ ನೆನೆಯುತ್ತಿದ್ದಾರೆ. ಇಂದು ಅವರಿಗೆ ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆ ಆಗಿದ್ದು, ಬೇಗ ಗುಣಮುಖರಾಗಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೂಡಿ ದೇವರಲ್ಲಿ ಮೊರೆ ಇಟ್ಟಿದ್ದೇವೆ ಎಂದರು.
ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ರಾಜ್ಯದ ಜನರಿಗೆ ನೀಡುವ ಮೂಲಕ ದೇಶ ಮೆಚ್ಚುವ ಆಡಳಿತ ನೀಡಿದ್ದ ಕುಮಾರಣ್ಣ, ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಲಿ, ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದರು.
ಪುರಸಭಾ ಸದಸ್ಯ ಸಂತೋಷ್ ಗೌಡ ಮಾತನಾಡಿ ರಾಜಕೀಯವಾಗಿ ಮಾತ್ರವಲ್ಲದೆ ವೈಯಕ್ತಿಕವಾಗಿ ಅನೇಕರಿಗೆ ಸಹಾಯ ಹಸ್ತ ಚಾಚಿರುವ ಕೊಡುಗೈ ದಾನಿ ಕುಮಾರಸ್ವಾಮಿ ಅವರಿಂದ ಮೈಸೂರು,ಮಂಡ್ಯ, ಹಾಸನ, ಕೊಡಗು, ಚಾ.ನಗರ ಭಾಗಕ್ಕೆ ಹಾಗು ರಾಜ್ಯಕ್ಕೆ ಮತ್ತಷ್ಟು ಕೊಡುಗೆ ಸಿಗಬೇಕಿದೆ. ಇದಕ್ಕಾಗಿ ಅವರಿಗೆ ದೇವರು ಇನ್ನೂ ಹೆಚ್ಚಿನ ಆಯಸ್ಸು ಆರೋಗ್ಯ ಕೊಟ್ಟು ಪದಲ ಕಾಪಾಡಲಿ ಎಂದರಲ್ಲದೆ
ಜನಪರ ನಾಯಕ, ಜನಪರ ಕಾಳಜಿಯುಳ್ಳ ಕುಮಾರಸ್ವಾಮಿ ಅವರು ನಾಡಿನ ಜನರು, ರೈತರು ಹಾಗೂ ಗುರು ಹಿರಿಯರ ಆಶೀರ್ವಾದರಿಂದ ಬೇಗ ಗುಣಮುಖರಾಗಿ ಬರಲಿದ್ದಾರೆ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ ಎಂದು ತಿಳಿಸಿದರು.
ರೈತರ ಸಾಲ ಮನ್ನಾ, ಶಿಕ್ಷಣ ಕ್ಷೇತ್ರದಲ್ಲೂ ಹೊಸ ಕ್ರಾಂತಿಕಾರಕ ಬದಲಾವಣೆ ತಂದು ಸಾಕಷ್ಟು ಕೊಡಿಗೆ ನೀಡಿರುವ ಕುಮಾರಣ್ಣ ಬೇಗ ಗುಣಮುಖರಾಗಿ ಬರಲಿ ಎಂದರು
ತಾಲ್ಲೂಕು ಜಾದಳ ಅಧ್ಯಕ್ಷ ಹಂಪಾಪುರ ಕುಮಾರ್, ಜಿ.ಪಂ. ಮಾಜಿ ಸದಸ್ಯ ಎಂ.ಟಿ.ಕುಮಾರ್, ಜೆಡಿಎಸ್ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಕಗ್ಗರೆ ಕುಚೇಲ, ಪುರಸಭಾ ಸದಸ್ಯರಾದ ಜಗದೀಶ್, ಮಂಜುಳ, ಮಾಜಿ ಸದಸ್ಯ ಬಾಂಬೆರಾಜಣ್ಣ, ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಾಜಲಕ್ಷ್ಮೀ,ಪದಾಧಿಕಾರಿಗಳಾದ, ಭಾಗ್ಯಮ್ಮ, ರೂಪ,ಗೀತಾ,ರಶ್ಮಿ ಮೋಹನಕುಮಾರಿ, ಜಾದಳ ಮುಖಂಡರಾದ ಲಾಲನಹಳ್ಳಿ ಮಹೇಶ್, ಮಲ್ಲಪ್ಪ, ಗ್ರಾ.ಪಂ.ಸದಸ್ಯ ಬಾಲಾಜಿಗಣೇಶ್, ಮಾದೇಶ್, ರುದ್ರೇಶ್,ಚಂದಗಾಲುರಾಘು, ಚಿಕ್ಕನಾಯಕನಹಳ್ಳಿ ಸುರೇಶ್ ಸೇರಿದಂತೆ ಅನೇಕರು ಇದ್ದರು.