Friday, April 11, 2025
Google search engine

Homeಸಿನಿಮಾಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಹೋಮ-ಹವನ;ಹಲವು ಕಲಾವಿದರು ಭಾಗಿ

ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಏಳಿಗೆಗಾಗಿ ವಿಶೇಷ ಪೂಜೆ, ಹೋಮ-ಹವನ;ಹಲವು ಕಲಾವಿದರು ಭಾಗಿ

ಬೆಂಗಳೂರು: ಇತ್ತೀಚಿನ ಕೆಲ ದಿನಗಳಿಂದ ಕನ್ನಡ ಚಿತ್ರರಂಗ ಬಹಳ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿತ್ರರಂಗವನ್ನು ಕಾಪಾಡುವಂತೆ ಕಲಾವಿದರ ಸಂಘ ಇಂದು ವಿಶೇಷ ಪೂಜೆ ಬೃಹತ್‌ ಹೋಮ-ಹವನ ನಡೆಸಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ಪೂಜೆ ಹಮ್ಮಿಕೊಳ್ಳಲಾಗಿದೆ. ಹಿರಿಯ ನಟಿ ಶಾಂತಲಾ, ಮಾಲತಿ ಶ್ರೀ ಮೈಸೂರು, ಪದ್ಮಜಾ ರಾವ್ ಮೊದಲಾದವರು ದೀಪ ಬೆಳಗಿ ಪೂಜೆಗೆ ಚಾಲನೆ ನೀಡಿದರು.

ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ಪೂಜೆ ಹೋಮ ಹವನ ನಡೆಯುತ್ತಿದ್ದು, ಬೆಳಿಗ್ಗೆ 8 ಗಂಟೆಯಿಂದ ಪೂಜೆ ಆರಂಭವಾಗಿದ್ದು, ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆಯುತ್ತಿದೆ. ಕಲಾವಿದರಾದ ಪದ್ಮಾವಾಸಂತಿ, ಪದ್ಮಜಾರಾವ್, ನಟ ಪ್ರೇಮ್ , ಅಭಿಷೇಕ್ ಅಂಬರೀಶ್ ಸೇರಿ ಕನ್ನಡ ಚಿತ್ರರಂಗದ ತಂತ್ರಜ್ಞರು, ಕಲಾವಿದರು ಸೇರಿ 600 ಮಂದಿ ಇದರಲ್ಲಿ ಭಾಗಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular