ಮಂಗಳೂರು (ದಕ್ಷಿಣ ಕನ್ನಡ) : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಇಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಮೇ 07ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ʼಆಪರೇಷನ್ ಸಿಂಧೂರʼ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಅನುಗ್ರಹಿಸಲಿ ಎಂದು ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.