Wednesday, January 14, 2026
Google search engine

Homeರಾಜ್ಯಸುದ್ದಿಜಾಲಮಕರ ಸಂಕ್ರಾಂತಿಗೆ ಶಬರಿಮಲೆಯಲ್ಲಿ ವಿಶೇಷ ಪೂಜೆ, ಜ್ಯೋತಿ ದರ್ಶನ

ಮಕರ ಸಂಕ್ರಾಂತಿಗೆ ಶಬರಿಮಲೆಯಲ್ಲಿ ವಿಶೇಷ ಪೂಜೆ, ಜ್ಯೋತಿ ದರ್ಶನ

ಕೇರಳ : ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಭಕ್ತರಿಗೆ ಅಯ್ಯಪ್ಪನ ದರ್ಶನವಾಯಿತು. ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಉದ್ಭವಿಸುವ ಮಕರ ಜ್ಯೋತಿಯನ್ನ (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು.

ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿತ್ತು. ಸಂಜೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಭಕ್ತರು ಜ್ಯೋತಿ ಕಣ್ತುಂಬಿಕೊಂಡರು.

ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ಬುಧವಾರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. ಪಂದಳ ರಾಜಮನೆತನದಿಂದ ಆಭರಣಗಳನ್ನ ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪನ ದರ್ಶನವಾಯಿತು.

RELATED ARTICLES
- Advertisment -
Google search engine

Most Popular