ಗುಂಡ್ಲುಪೇಟೆ: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿರುವ ಶ್ರೀರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರು ಪೂರ್ಣಿಮೆ ಅಂಗವಾಗಿ ವಿಶೇಷ ಪೂಜೆ ನಡೆಯಿತು.
ಶ್ರೀರಾಮೇಶ್ವರ ಸ್ವಾಮಿ ಮೂರ್ತಿಗೆ ವಿಭೂತಿ, ಹಾಲು, ಮೊಸರು ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ಮಾಡಿ ನಾನಾ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ದೇವಸ್ಥಾನ ಅರ್ಚಕ ಶಂಕರ ನಾರಾಯಣ್ ಜೋಯಿಸಿ ಶ್ರೀರಾಮೇಶ್ವರ ಸ್ವಾಮಿಗೆ ಮಹಾ ಮಂಗಳಾರತಿ ನೆರವೇರಿಸಿದರ. ಈ ವೇಳೆ ಮಹಿಳಾ ಭಕ್ತಾದಿಗಳು ದೇವರ ನಾಮ ಹಾಡಿದರು.
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ನೂರಾರು ಮಂದಿ ಭಕ್ತಾದಿಗಳು ಆಗಮಿಸಿ ಪೂಜೆ ಸಲ್ಲಿಕೆ ಮಾಡಿದರು. ದೇವಸ್ಥಾನಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿತ್ತು.