Sunday, April 20, 2025
Google search engine

Homeರಾಜ್ಯಜ.6 ರಿಂದ ʼಯುವನಿಧಿʼ ವಿಶೇಷ ನೋಂದಣಿ ಅಭಿಯಾನ

ಜ.6 ರಿಂದ ʼಯುವನಿಧಿʼ ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು : ‘ಯುವನಿಧಿ ಯೋಜನೆ’ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳು ನೋಂದಾಯಿಸುವಂತಾಗಲು ಜ.6 ರಿಂದ 20ರ ವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯಾದಾದ್ಯಂತ ಎಲ್ಲ ರಾಜ್ಯ ಅಂಗೀಕೃತ ವಿಶ್ವ ವಿದ್ಯಾನಿಲಯಗಳ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಹಮ್ಮಿಕೊಳ್ಳಲಾಗಿದೆ.

2023 ಹಾಗೂ 2024ನೆ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆಯಾದ ಅಭ್ಯರ್ಥಿಗಳು ಈ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬಹುದು. ಕರ್ನಾಟಕ ಸರಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ ಯೋಜನೆ’ಯು ರಾಜ್ಯದ 2023-24 ಹಾಗೂ 2024-25ನೆ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆಯಾದ ಅರ್ಹ ನಿರುದ್ಯೋಗಿ ಯುವಕ, ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಸರಕಾರದ ಮಹತ್ತರ ಯೋಜನೆಯಾಗಿದೆ ಎಂದು ಪ್ರಕಟನೆ ತಿಳಿಸಿದೆ.

ನೋಂದಣಿಗಾಗಿ ಅರ್ಹತೆ: 2023-24 ಮತ್ತು 2024-25ನೆ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದವರು. ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇಲ್ಲದೆ ಇರುವವರು, ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು, ಕನಿಷ್ಠ 6 ವರ್ಷ ಕರ್ನಾಟಕದ ನಿವಾಸಿ ಆಗಿರಬೇಕು.

ನೋಂದಣಿಗಾಗಿ ಸೇವಾಸಿಂಧು ಪೋರ್ಟಲ್ www.sevasindhugs.karnataka.gov.in, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್ https://nad.karnataka.gov.in ನಲ್ಲಿ ಇಂಡೀಕರಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡುವುದು ಅಥವಾ ಸಹಾಯವಾಣಿ ಸಂಖ್ಯೆ 1800 5997154 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

RELATED ARTICLES
- Advertisment -
Google search engine

Most Popular