ಮಡಿಕೇರಿ : ೨೦೨೩ ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯು ಜಿಲ್ಲಾ ಮಟ್ಟದಲ್ಲಿ ಡಿ. ೦೩ ರಂದು ಆಚರಿಸುವ ಸಲುವಾಗಿ ಜಿಲ್ಲೆಯ ಮೂರು ತಾಲ್ಲೂಕುಗಳ ವಿಶೇಷಚೇತನರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನವೆಂಬರ್, ೨೪ ರಂದು ಬೆಳಗ್ಗೆ ೧೦ ಗಂಟೆಗೆ ಗೋಣಿಕೊಪ್ಪ ದಸರಾ ಮೈದಾನ, ನ. ೨೯ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಗಾಂಧಿ ಮೈದಾನ ಮತ್ತು ನ. ೨೯ ರಂದು ಬೆಳಗ್ಗೆ ೧೦ ಗಂಟೆಗೆ ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.
ಜಿಲ್ಲೆಯ ಎಲ್ಲಾ ವಿಶೇಷ ಚೇತನರು ಆಯಾಯ ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಾಗೂ ಡಿಸೆಂಬರ್, ೦೩ ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನಾಚರಣೆಯನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ಕೋರಿದ್ದಾರೆ.