ತುಮಕೂರು: ಇಂದಿನಿಂದ ಮೂರು ದಿನಗಳ ಕಾಲ ತುಮಕೂರಿನಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದೆ.
ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಇಂದು ಸಂಜೆ 4.30 ಕ್ಕೆ ನಡೆಯುವ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾಗೇಂದ್ರ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಹಕಾರ ಸಚಿವ ಕೆಎನ್ ರಾಜಣ್ಣ, ಸಂಸದ ಜಿ.ಎಸ್ ಬಸವರಾಜ್, ಶಾಸಕರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಕ್ರೀಡಾಕೂಟದಲ್ಲಿ ಸುಮಾರು 10 ಸಾವಿರ ಸರ್ಕಾರಿ ನೌಕರರು ಭಾಗಿಯಾಗುವ ಸಾಧ್ಯತೆ ಇದೆ.