ಹುಣಸೂರು: ಹುಣಸೂರು ತಾಲೂಕು ಪತ್ರಕರ್ತರ ಸಂಘವು ಪತ್ರಿಕಾ ದಿನಾಚರಣೆ ಅಂಗವಾಗಿ ಜೂನ್.೨೯ ರಂದು ಪತ್ರಕರ್ತರು, ಪತ್ರಕರ್ತರ ಕುಟುಂಬಸ್ಥರಿಗೆ ಮತ್ತು ಪತ್ರಿಕೆಯನ್ನು ಮನೆ ಮನೆಗೆ ತಲುಪಿಸುವ ಹುಡುಗರಿಗೆ ಕ್ರೀಡಾಕೂಟವನ್ನು ಆಯೋಜಿಸಿದೆ.
ಜೂನ್ ೨೯ ರ ಗುರುವಾರ ಬೆಳಿಗ್ಗೆ ೯.೩೦ ಗಂಟೆಗೆ ನಗರಸಭಾ ಮೈದಾನದಲ್ಲಿ ಕ್ರೀಡಾಕೂಟಕ್ಕೆ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ಚಾಲನೆ ನೀಡುವರು.
ಸಮಾರಂಭದ ಅಧ್ಯಕ್ಷತೆಯನ್ನು ಹುಣಸೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಚ್ ಆರ್ ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದು,
ಮುಖ್ಯ ಅತಿಥಿಗಳಾಗಿ ತಾಲೂಕು ದಂಡಾಧಿಕಾರಿ ಡಾ. ಅಶೋಕ್ , ಡಿ ವೈ ಎಸ್ ಪಿ ಮಹೇಶ್, ಉಪ ನಗರಸಭಾ ಪೌರಾಯುಕ್ತ ಸುಜಯ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ದೇವೇಂದ್ರ, ಉದ್ಯಮಿಗಳಾದ ನಾಡಪನಹಳ್ಳಿ ರಾಜು ಶಿವರಾಜೇಗೌಡ, ಗಣೇಶ್ ಕುಮಾರಸ್ವಾಮಿ, ಹರವೆ ಶ್ರೀಧರ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ದಾ.ರಾ ಮಹೇಶ್, ಹುಣಸೂರು ಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಹನಗೋಡು ನಟರಾಜ್, ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಸ್. ಸಚ್ಚಿತ್, ಪ್ರಧಾನ ಕಾರ್ಯದರ್ಶಿ ಪ್ರತಾಪ್ ಕೆ. ಭಾಗವಹಿಸುವರೆಂದು ಸಂಘದ ಪ್ರಧಾನ ಕಾರ್ಯದರ್ಶಿ ನೇರಳಕುಪ್ಪೆ ಮಹದೇವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಪತ್ರಕರ್ತರಿಗೆ ಕ್ರೀಡಾಕೂಟ ಆಯೋಜನೆ
RELATED ARTICLES