ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಮೇ.10 ಬೆಳಗ್ಗೆ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ ಅವರು ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಶಿವಶರಣ ಶ್ರೀ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರು, ಗಣ್ಯರು, ಹಿರಿಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.