ಚಾಮರಾಜನಗರ: ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ಸ್ವಾಮಿ ರಥೋತ್ಸವವು ಜುಲೈ 20ರ ಶನಿವಾರದಂದು ವೈಭವದಿಂದ ಜರಗಲಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಪರಂಪರೆಯ ಹಬ್ಬ ಶ್ರೀ ಚಾಮರಾಜೇಶ್ವರ ರಥೋತ್ಸವ ವಿಶೇಷ ಕಾರ್ಯಕ್ರಮದ ಅಂಗವಾಗಿ ಶ್ರೀ ಚಾಮರಾಜೇಶ್ವರ ಸ್ವಾಮಿ ರಥೋತ್ಸವದ ಮಹತ್ವದ ಕುರಿತು ವಿಶೇಷ ಕಾರ್ಯಕ್ರಮವನ್ನು ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಜುಲೈ 19ರ ಶುಕ್ರವಾರ ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ .