Thursday, June 11, 2026
Google search engine

Homeರಾಜ್ಯಸುದ್ದಿಜಾಲಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿಆಚರಣೆ : ಆರ್. ಐಶ್ವರ್ಯ

ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿಆಚರಣೆ : ಆರ್. ಐಶ್ವರ್ಯ

ಮೈಸೂರು : ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಅದೇ ರೀತಿ ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್. ಐಶ್ವರ್ಯ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶ್ರೀ ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಬೆಳಗ್ಗೆ 11:30 ಕ್ಕೆ ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಲಾಗುವುದು ಎಂದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯ ಮೇಲೆ ಗಣ್ಯರಿಗೆ ಬೊಕ್ಕೆಗಳನ್ನು ನೀಡಿ ಸ್ವಾಗತ ಮಾಡುವ ಬದಲು ಆಯಾ ಜಯಂತಿಗಳಲ್ಲಿ ಆ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ವಿವಿಧ ಜಯಂತಿಗಳ ಆಚರಣೆ ಮಾಡುವಾಗ ಮೈಸೂರು ನಗರದಲ್ಲಿ ಇರುವ ಎಲ್ಲಾ ಮಹನೀಯರ ಪ್ರತಿಮೆಗಳನ್ನು ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಡಿ ಎಂ ಸುದರ್ಶನ್ ಅವರು ಮಾತನಾಡಿ ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಸಮುದಾಯದ ಮುಖಂಡರು ಮಾತನಾಡಿ ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular