ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೇಸ್‌ನಲ್ಲಿ ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಈ ಹಿಂದೆಯೇ ರಾಜ್ಯಪಾಲರ ಬಳಿ ಅನುಮತಿ ಕೇಳಲಾಗಿತ್ತು. ದೋಷಾರೋಪ ಪಟ್ಟಿಯನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಲು ರಾಜ್ಯಪಾಲರು ಸೂಚಿಸಿದ್ರು. ಅದರಂತೆ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ತರ್ಜುಮೆ ಮಾಡಲಾಗಿದೆ.
ಸುಮಾರು 4,500 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.