ಕೊಪ್ಪಳ : ಜ.೧೯ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಿ ಎಂದು ಗ್ರೇಡ್-೨ ತಹಸೀಲ್ದಾರ್ ರಜನಿಕಾಂತ್ ಹೇಳಿದರು. ಜನವರಿ ೧೫ ರಂದು ಎಲ್ಲ ತಾಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ ಕಾಲೇಜುಗಳಲ್ಲಿ ಸರಕಾರ ನಿಗದಿಪಡಿಸಿದಂತೆ ಜಯಂತಿ ಆಚರಿಸಲಾಗುವುದು. ಆದರೆ ಸಮಾಜದ ಬೇಡಿಕೆಯಂತೆ ಜ.೧೯ರಂದು ಜಿಲ್ಲಾ ಕೇಂದ್ರದಲ್ಲಿ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಾಗಿದ್ದು, ಸಮಾಜದ ಬಂಧುಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಿ ಜಯಂತಿ ಆಚರಣೆಗೆ ಅನುಕೂಲ ಮಾಡಿಕೊಡಬೇಕು. ಅದೇ ರೀತಿ ಜಯಂತಿ ಆಚರಣೆಗೆ ಸಂಬಂಧಿಸಿದ ಇಲಾಖೆಗಳು ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಜ.೧೯ರಂದು ಬೆಳಗ್ಗೆ ೦೮.೩೦ಕ್ಕೆ ನಗರದ ಗವಿಮಠದಿಂದ ಆರಂಭವಾದ ಮೆರವಣಿಗೆ ಗಡಿಯಾರ ಕಂಬದ ಮೂಲಕ ಸಾಹಿತ್ಯ ಭವನ ತಲುಪಲಿದೆ. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾ ತಂಡಗಳು. ಮೆರವಣಿಗೆ ನಡೆಸುವ ಸಾಹಿತ್ಯ ಭವನದಲ್ಲಿ ಪುರಸಭೆಯವರು ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂ, ಮಾಲೆಗಳನ್ನು ನೀಡಬೇಕು. ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳು ನಡೆಯುವ ಸಾಹಿತ್ಯ ಭವನದಲ್ಲಿ ಪೊಲೀಸ್ ಇಲಾಖೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ, ಗಣ್ಯರ ಆಹ್ವಾನದ ವಿರುದ್ಧ ತಹಸೀಲ್ದಾರ್ ಕ್ರಮ ಕೈಗೊಳ್ಳಬೇಕು. ಉಳಿದಂತೆ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಜಯಂತಿ ಆಚರಣೆಗೆ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಸಮಾಜದ ಬೇಡಿಕೆಗೆ ಅನುಗುಣವಾಗಿ ಕಲಾವಿದರು ಮತ್ತು ಉಪನ್ಯಾಸಕರನ್ನು ಆಹ್ವಾನಿಸಿ ವೇದಿಕೆ ಕಾರ್ಯಕ್ರಮದಲ್ಲಿ ಜಾನಪದ ಗೀತೆ, ಸುಗಮ ಸಂಗೀತ ಉಪನ್ಯಾಸ ನೀಡಲು ಸೂಚಿಸಿದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವುದರಿಂದ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.