Friday, April 4, 2025
Google search engine

Homeರಾಜ್ಯಸುದ್ದಿಜಾಲಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರುಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಕೇವಲ ೩೫ ವರ್ಷದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ನಸುಕಿನ ಜಾವದಲ್ಲಿ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಇಂದು ಸಂಜೆ ೫ ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ನಿನ್ನೆ ರಟಕಲ್ ಗ್ರಾಮದಲ್ಲಿ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ರಟಕಲ್ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ ಅದ್ಧೂರಿ ವಚನ ಸಂಗಮ ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಈ ಕಾರ್ಯಕ್ರಮ ಮುಗಿಸಿದ ಮರಳಿ ಮಠಕ್ಕೆ ಆಗಮಿಸಿದ್ದ ಸ್ವಾಮೀಜಿ ಅವರ ಆರೋಗ್ಯ ಸಹಜವಾಗಿತ್ತು. ಆದರೆ ಮರುದಿನ ಬೆಳಗಿನ ನಸುಕಿನಲ್ಲಿ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿಗಳು ಶಿವೈಕ್ಯರಾಗಿದ್ದಾರೆ.

RELATED ARTICLES
- Advertisment -
Google search engine

Most Popular