ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿಯಿಂದ ಬಾರು ಕೋಲು ಚಳವಳಿ ನಡೆಸಿದ್ದಾರೆ.
ಬಾರುಕೋಲು ಹಿಡಿದು ಮೆರವಣಿಗೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪಟ್ಟಣದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಧರಣಿ ಕುಳಿತು ಧಿಕ್ಕಾರ ಕೂಗಿ ಸರ್ಕಾರದ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ.