ಶ್ರೀರಂಗಪಟ್ಟಣ: ಕಾವೇರಿ ಕಿಚ್ಚು ಮುಂದುವರೆದಿದ್ದು, ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ನಲ್ಲಿರುವ ನೀರಾವರಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಕಚೇರಿಗೆ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಪ್ರತಿಭಟನೆ ವೇಳೆ ಕಚೇರಿಯಲ್ಲಿ ಇಲ್ಲದ ಇಇ ಜಯಂತ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಸಮರ್ಪಕ ಉತ್ತರ ನೀಡದ ಎಇಇ ಕಿಶೋರ್ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ವಿರುದ್ಧವೂ ಆಕ್ರೋಶ ಹೊರ ಹಾಕಿದ್ದು, ಬಂಧನ ಮಾಡುವುದಾದರೆ ಮಾಡಿ ಎಂದು ಸವಾಲು ಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಇಇ ಜಯಂತ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ನೀರಾವರಿ ನಿಗಮದ ಬೋರ್ಡ್ ತೆಗೆದು ತಮಿಳುನಾಡು ಬೋರ್ಡ್ ಹಾಕಿ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದು, ಕೂಡಲೇ ನೀರು ಹರಿಸುವುದನ್ನ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.