ಶ್ರೀರಂಗಪಟ್ಟಣ: ಧಾರಾಕಾರ ಮಳೆಗೆ ವಿದ್ಯುತ್ ಕಂಬಗಳು ಉರುಳಿ ಬಿದ್ದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿ ನಡೆದಿದೆ.
ಟ್ರಾನ್ಸ್ ಫಾರ್ಮ್ ಸೇರಿದಂತೆ 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಸಮವಾಗಿವೆ.
ನೆನ್ನೆ ಸಂಜೆಯಿಂದ ರಾತ್ರಿಯವರೆಗೂ ಸುರಿದ ಗುಡುಗು ಸಹಿತ ಧಾರಾಕಾರ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ರಸ್ತೆಗೆ ವಿದ್ಯುತ್ ಕಂಬಗಳು ವಾಲಿದ್ದರಿಂದ ನಿಮಿಷಾಂಬ ದೇಗುಲ ರಸ್ತೆ ಬಂದ್ ಆಗಿದೆ.