ಶ್ರೀರಂಗಪಟ್ಟಣ: ಕಾವೇರಿ ನದಿಗಿಳಿದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ ಸಮೀಪದ ಗಂಜಾಮ್ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಗಿಳಿದು ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ನೀರು ಬಿಟ್ಟ ರಾಜ್ಯ ಸರ್ಕಾರ ಮತ್ತು ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ತಮಿಳು ನಾಡಿಗೆ ಹರಿಸ್ತಿರೋ ನೀರು ನಿಲ್ಲಿಸಲು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.