ಮಂಡ್ಯ: ಕೆಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಹಣೆಗೆ ನಾಮ ಹಾಕಿಕೊಂಡು, ಜಾಗಟೆ ಬಾರಿಸುತ್ತ ಶ್ರೀರಂಗಪಟ್ಟಣದಲ್ಲಿ ರೈತಸಂಘ ವಿನೂತನವಾಗಿ ಪ್ರತಿಭಟನೆ ನಡೆಸಿದೆ.
ಶ್ರೀರಂಗಪಟ್ಟಣದ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಜಾಗಟೆ ಬಾರಿಸುತ್ತ, ಗೋವಿಂದ ಗೋವಿಂದ ನೀರು ಗೋವಿಂದ ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಸರ್ಕಾರ ನಮಗೆ ನಾಮ ಹಾಕಿದೆ. ಕುಡಿಯಲು ನೀರಿಲ್ಲದಂತೆ ಮಾಡಿದೆ ಎಂದು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.