ಗುಂಡ್ಲುಪೇಟೆ: ವಿದ್ಯಾರ್ಥಿಗಳಿಗೆ ಶಿಕ್ಷಣ ಎಂಬುದು ಬರೀ ಕಲಿಕೆಯಾಗದೆ ಅಸ್ತ್ರವಾಗಬೇಕು ಎಂದು ಮುಖ್ಯ ಶಿಕ್ಷಕಿ ಸುನೀತಾ ಸಲಹೆ ನೀಡಿದರು.
ಪಟ್ಟಣದ ಹೊರ ವಲಯದಲ್ಲಿರುವ ಸೆಂಟ್ ಜಾನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಂಜಮ್ಮ ಶ್ರೀ ಗೋಪಾಲಕೃಷ್ಣಮೂರ್ತಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಗಂದರ್ವಿನಿ, ಸಂಜನಾ, ಪ್ರೀತಂ ಎಂಬ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸನ್ಮಾಸಲಾಯಿತು.
ನಂತರ ಮಾತನಾಡಿದ ಮುಖ್ಯ ಶಿಕ್ಷಕಿ ಸುನೀತಾ, ಶಿಕ್ಷಣ ಎಲ್ಲರ ಬದುಕಿಗೆ ದಾರಿ ದೀಪವಾಗಬೇಕು. ವಿಧ್ಯೆಯ ಜೊತೆಗೆ ವಿನಯತೆ, ಸಂಸ್ಕಾರಗಳನ್ನು ಬೆಳಸಿಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಟ್ರಸ್ಟ್ ನ ವ್ಯವಸ್ಥಾಪಕರಾದ ಜಿ.ನಾಗೇಂದ್ರ ಹಾಗೂ ಸದಸ್ಯರಾದ ಅರುಣ್ ಆರ್. ವಿದ್ಯಾರ್ಥಿಗಳಿಗೆ ಚೆಕ್ ವಿತರಿಸಿದರು.
ಈಸಂದರ್ಭದಲ್ಲಿ ಸೆಂಟ್ ಜಾನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.