ಬೆಂಗಳೂರು: ಎಸ್ ಎಸ್ ಎಲ್ ಸಿ ಅರ್ಧವಾರ್ಷಿಕ ಪರೀಕ್ಷೆಗಳು ಸಂಕಲನಾತ್ಮಕ ಮೌಲ್ಯಮಾಪನ-1 (Summative assessment-1) ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 01 ರವರೆಗೆ ನಡೆಯಲಿವೆ.
ಇದೇ ಮೊದಲ ಬಾರಿ ಎಲ್ಲಾ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುತ್ತದೆ . ಪರೀಕ್ಷಾ ಸಮಯಕ್ಕೆ ಸರಿಯಾಗಿ ಎಲ್ಲಾ ಶಾಲೆಗಳಿಗೂ ಪ್ರಶ್ನೆ ಪತ್ರಿಕೆಗಳು ತಲುಪಲಿವೆ. ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ಅಕ್ಟೋಬರ್ 01 ರಂದು ಮಧ್ಯಾಹ್ನ ಎರಡರಿಂದ ಆಯಾ ಶಾಲೆಗಳಲ್ಲಿಯೇ ನಡೆಸಲು ಮಂಡಳಿ ಸೂಚಿಸಿದೆ.