Friday, April 4, 2025
Google search engine

Homeರಾಜ್ಯಫೆ.25ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಫೆ.25ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.25 ರಿಂದ ಮಾ.4ರವರೆಗೆ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯೂ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಿದೆ.

SSLC ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಹೀಗಿದೆ:

ಫೆ.25- ಪ್ರಥಮ ಭಾಷೆ

ಫೆ.27- ಗಣಿತ

ಫೆ.28 – ದ್ವಿತೀಯ ಭಾಷೆ

ಮಾ.1- ತೃತೀಯ ಭಾಷೆ,

ಮಾ.3 – ವಿಜ್ಞಾನ

ಮಾ.4-ಸಮಾಜ ವಿಜ್ಞಾನ

ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10ಕ್ಕೆ ಆರಂಭವಾಗಲಿದ್ದು, ದ್ವಿತೀಯ ಮತ್ತು ತೃತೀಯ ಭಾಷಾ ಪರೀಕ್ಷೆಗಳು ಮಧ್ಯಾಹ್ನ -1 ಗಂಟೆವರೆಗೆ, ಉಳಿದ ಪರೀಕ್ಷೆಗಳು ಮಧ್ಯಾಹ್ನ 1.15ರವರೆಗೆ ನಡೆಯಲಿವೆ.

RELATED ARTICLES
- Advertisment -
Google search engine

Most Popular