Monday, April 21, 2025
Google search engine

Homeರಾಜ್ಯಸುದ್ದಿಜಾಲಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ; ಶೇ 73.4 ಮಂದಿ ತೇರ್ಗಡೆ- ಉಡುಪಿ ಜಿಲ್ಲೆಗೆ...

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ; ಶೇ 73.4 ಮಂದಿ ತೇರ್ಗಡೆ- ಉಡುಪಿ ಜಿಲ್ಲೆಗೆ  ಪ್ರಥಮ ಸ್ಥಾನ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು.

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.

ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.

ಈ ಬಾರಿ ಎಸ್ ​ಎಸ್ ​ಎಲ್ ​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್ ​ಎಸ್ ​ಎಲ್ ​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಉಡುಪಿ ಜಿಲ್ಲೆಗೆ ಮೊದಲ ಸ್ಥಾನ

ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ. ಉಡುಪಿ ಜಿಲ್ಲೆಯಲ್ಲಿ ಶೇ 94ರ ಫಲಿತಾಂಶ ದಾಖಲಾಗಿದೆ.

ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ.

ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆ ಶೇ 92.12, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ.

RELATED ARTICLES
- Advertisment -
Google search engine

Most Popular