ರಾಮನಗರ: ಜಿಲ್ಲೆಯಲ್ಲಿ ಜೂ. 12 ರಿಂದ ಜೂ.19ರ ವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಜೂ. 12ರಂದು ಪ್ರಥಮ ಭಾಷೆ, ಜೂ. 13ರಂದು ವಿಜ್ಞಾನ, ಜೂ. 14ರಂದು ದ್ವಿತೀಯ ಭಾಷೆ, ಜೂ. 15ರಂದು ಸಮಾಜ ವಿಜ್ಞಾನ, ಜೂ. 16ರಂದು ತೃತೀಯ ಭಾಷೆ, ಜೂ. 17ರಂದು ಗಣಿತ ಹಾಗೂ ಜೂ. 19ರಂದು ಅರ್ಥಶಾಸ್ತç ಪರೀಕ್ಷೆ ನಡೆಯಲಿದೆ.
ಜಿಲ್ಲೆಯಲ್ಲಿ ಒಟ್ಟು 1432 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರಲ್ಲಿ 218 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 7 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಅವುಗಳಲ್ಲಿ ರಾಮನಗರ-1+1=2, ಕನಕಪುರ-2, ಚನ್ನಪಟ್ಟಣ-01 ಮತ್ತು ಮಾಗಡಿ-02 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ರಾಮನಗರದ ಲೂರ್ದ್ ಪ್ರೌಢಶಾಲೆ, ರೈಲ್ವೆ ಸ್ಟೇಷನ್ ಹತ್ತಿರ, ರಾಮನಗರ ಟೌನ್ ಈ 1 ಖಾಸಗಿ ಪರೀಕ್ಷಾ ಕೇಂದ್ರವನ್ನು ಸೂಕ್ಷö್ಮ ಕೇಂದ್ರವೆAದು ಗುರುತಿಸಿದೆ. ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸಲು ಜಿಲ್ಲೆಯಲ್ಲಿ 04 ಮಾರ್ಗಗಳನ್ನು ರಚಿಸಿದ್ದು, ಅವುಗಳಲ್ಲಿ ರಾಮನಗರ-01, ಕನಕಪುರ-01, ಚನ್ನಪಟ್ಟಣ-01 ಮತ್ತು ಮಾಗಡಿ 01.
ಪ್ರತೀ ಪರೀಕ್ಷಾ ಕೇಂದ್ರಕ್ಕೆ ಸ್ಥಾನಿಕ ಜಾಗೃತದಳ/ಮೊಬೈಲ್ ಸ್ವಾಧೀನಾಧಿಕಾರಿ/ಪ್ರಶ್ನೆ ಪತ್ರಿಕೆ ಅಭಿರಕ್ಷಕರು ಹಾಗು ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದ ಅಧೀಕ್ಷಕರ ಕೊಠಡಿ ಹಾಗು ಕಾರಿಡಾರ್‌ಗೆ ಸಿಸಿ ಕ್ಯಾಮೆರಾ ಅಳವಡಿಸಲು ಹಾಗು ಪರೀಕ್ಷಾ ದಿನಗಳಂದು ಸುಸ್ಥಿತಿಯಲ್ಲಿಡಲು ಮತ್ತು ಪರೀಕ್ಷೆ ಮುಗಿದ ನಂತರ ಎಲ್ಲಾ ಪರೀಕ್ಷಾ ದಿನಗಳ ಸಿಸಿಟಿವಿ ಫೂಟೇಜ್ ಸಲ್ಲಿಸಲು ಪರೀಕ್ಷಾ ಅಧೀಕ್ಷಕರಿಗೆ ತಿಳಿಸಿದೆ
ಶೌಚಾಲಯ ವ್ಯವಸ್ಥೆ ಹಾಗೂ ಪ್ರತಿ ಕೊಠಡಿಗೆ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರ ಮುಖ್ಯ ಅಧೀಕ್ಷಕರಿಗೆ ಈ ಸಂಬAಧ ನಿರ್ದೇಶನ ನೀಡಿದೆ.
ಪರೀಕ್ಷಾ ಕೇಂದ್ರದ ಪಾವಿತ್ರö್ಯತೆ ಕಾಪಾಡಲು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು ಡಯಟ್ ಪ್ರಾಂಶುಪಾಲರ ನೇತೃತ್ವದಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಹಂತದಲ್ಲಿ ವಿಚಕ್ಷಣಾದಳ ರಚಿಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವಂತೆ ಕ್ರಮವಹಿಸಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸ್ಥಾನಿಕ ಜಾಗೃತ ದಳದ ಸದಸ್ಸರನ್ನು ರೊಟೇಷನ್ ಆಧಾರದಲ್ಲಿ ನೇಮಿಸಲಾಗಿದೆ.
ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಕಸ್ಟೋಡಿಯನ್, ಜಾಗೃತ ದಳ, ಮೊಬೈಲ್ ಕಸ್ಟೋಡಿಯನ್ ಹಾಗೂ ಸಿಬ್ಬಂದಿಗಳಿಗೆ ಉಪನಿರ್ದೇಶಕರ/ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ತರಬೇತಿ ನೀಡಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ಗರಿಷ್ಠ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.
ಪ್ರತೀ ತಾಲ್ಲೂಕಿಗೆ ಒಂದು 108 ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೇಂದ್ರ ತೆರೆದು ಇಬ್ಬರು ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಪೋಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಪರೀಕ್ಷಾ ಕೇಂದ್ರದ ಸುತ್ತ ಇರುವ ಜರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚಲು ಕ್ರಮಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.