Wednesday, May 21, 2025
Google search engine

Homeರಾಜ್ಯಚೂರಿ ಇರಿತ ಪ್ರಕರಣ: ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಸೂಕ್ತ ಕ್ರಮ: ದಿನೇಶ್ ಗುಂಡೂರಾವ್

ಚೂರಿ ಇರಿತ ಪ್ರಕರಣ: ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಸೂಕ್ತ ಕ್ರಮ: ದಿನೇಶ್ ಗುಂಡೂರಾವ್

ಮಂಗಳೂರು: ಬೋಳಿಯಾರುವಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಸೂಕ್ತ ಕ್ರಮ ಕೈಗೊಳ್ಳಲಾವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇಂದು ಸೋಮವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಯಾರೇ ಕಾನೂನಿಗೆ ವಿರುದ್ಧ ಹೋದರೆ ಕಠಿಣ ಕ್ರಮ ವಹಿಸಲಾಗುತ್ತದೆ. ಅದರ ಬಗ್ಗೆ ಬಿಜೆಪಿಯವರು ಹೇಳುವ ಅಗತ್ಯವಿಲ್ಲ. ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಕಾನೂನು ಪ್ರಕಾರ ಕ್ರಮವಾಗುವಾಗ ರಾಜಕೀಯ ಹಸ್ತಕ್ಷೇಪವಿಲ್ಲ. ಶಾಂತಿ ಮತ್ತು ಸುವ್ಯವಸ್ಥೆ ದ.ಕ ಜಿಲ್ಲೆಯಲ್ಲಿ ಇರಬೇಕೆಂದು ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular