ಮಂಗಳೂರು (ದಕ್ಷಿಣ ಕನ್ನಡ): ಬಿಜೆಪಿ ವಿಜಯೋತ್ಸವದ ಮೆರವಣಿಗೆ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೆರವಣಿಗೆ ನಡೆಸಿದವರು ಪ್ರಚೋದನಾಕಾರಿ ಘೋಷಣೆ ಮಾಡಿರುವುದು ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಹೇಳಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಮಾತಾಕಿ ಜೈ ಎಂಬ ಘೋಷಣೆಯಿಂದ ಪ್ರಚೋದನೆಗೊಂಡಿಲ್ಲ. ಬದಲಾಗಿ ಇದಕ್ಕೂ ಮೊದಲು ಮೆರವಣಿಗೆಯಲ್ಲಿ ಆಟೋ ನಿಲ್ದಾಣದ ಸಮೀಪ ಪಾಕಿಸ್ತಾನವನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಘೋಷಣೆಯನ್ನು ಕೂಗಿದ್ದಾರೆ ಇದು ಸೋಶಿಯಲ್ ಮೀಡಿಯಾದ ಮೂಲಕ ಸಮುದಾಯದವರಿಗೆ ತಲುಪಿದೆ. ಇದರಿಂದ ಕೆಲವರು ಈ ಕೃತ್ಯ ನಡೆಸಿದ್ದಾರೆ. ಈ ಬಗ್ಗೆಯೂ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದರು.