Wednesday, July 15, 2026
Google search engine

Homeರಾಜ್ಯ'ಬಿಡದಿಯಲ್ಲಿ ಅಲ್ಲ, ಮೋದಿ ಮುಂದೆ ಧರಣಿ ಮಾಡಿ' : ದೇವೇಗೌಡರಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಟಾಂಗ್

‘ಬಿಡದಿಯಲ್ಲಿ ಅಲ್ಲ, ಮೋದಿ ಮುಂದೆ ಧರಣಿ ಮಾಡಿ’ : ದೇವೇಗೌಡರಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಟಾಂಗ್

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರ ಪರವಾಗಿ ಧರಣಿ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಘೋಷಿಸಿರುವ ಬೆನ್ನಲ್ಲೇ, ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡದಿ ವಿಚಾರದಲ್ಲಿ ಧರಣಿ ನಡೆಸುವ ಬದಲು ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಪ್ರತಿಭಟನೆ ನಡೆಸಲಿ ಎಂದು ದೇವೇಗೌಡರಿಗೆ ಸಲಹೆ ನೀಡಿದರು.

ದೇವೇಗೌಡರು ಪ್ರಧಾನಿ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹಾಗಿದ್ದರೆ ಮೇಕೆದಾಟು ಮತ್ತು ಮಹದಾಯಿ ಯೋಜನೆಗಳ ಕುರಿತು ಕೇಂದ್ರದ ಮೇಲೆ ಒತ್ತಡ ಏಕೆ ತರುತ್ತಿಲ್ಲ? ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಹಾಸನ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳ ಬಗ್ಗೆ ದೇವೇಗೌಡರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಪುತ್ರ ವ್ಯಾಮೋಹ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕು ಎಂದು ಹೇಳಿದರು.

ಬಿಡದಿ ಪ್ರತಿಭಟನೆ ವೇಳೆ ರೈತರ ಮೇಲೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ ಶಾಸಕ ಬಾಲಕೃಷ್ಣ, ಗಲಾಟೆ ನಡೆಸಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಾತ್ರ ಪ್ರಕರಣ ದಾಖಲಾಗಿದೆ ಎಂದರಲ್ಲದೆ, ಅಧಿಕಾರಿಗಳ ದೂರಿನ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆದಾಗ ಅವರು ದೂರು ನೀಡುವುದು ಸಹಜ ಎಂದು ಪ್ರತಿಕ್ರಿಯಿಸಿದರು.


RELATED ARTICLES
- Advertisment -
Google search engine

Most Popular