Friday, April 18, 2025
Google search engine

Homeರಾಜ್ಯನಾಗ್ಪುರದ ಬಿಜೆಪಿ ಕಾರ್ಯಕ್ರಮದಲ್ಲಿ ಕಾಲ್ತುಳಿತ : ಮಹಿಳೆ ಸಾವು, 4 ಮಂದಿಗೆ ಗಾಯ

ನಾಗ್ಪುರದ ಬಿಜೆಪಿ ಕಾರ್ಯಕ್ರಮದಲ್ಲಿ ಕಾಲ್ತುಳಿತ : ಮಹಿಳೆ ಸಾವು, 4 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ೫೦ ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾಗ್ಪುರ ಬಿಜೆಪಿ ಘಟಕವು ರೇಶಿಂಬಾಗ್ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರಿಗೆ ಪಾತ್ರೆಗಳನ್ನು ವಿತರಿಸಲಾಗಿದ್ದು, ಸ್ಥಳದಲ್ಲಿ ಅಪಾರ ಜನಸ್ತೋಮ ನೆರೆದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಮನು ತುಳಸಿರಾಮ್ ರಜಪೂತ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ನಾಲ್ವರು ಮಹಿಳೆಯರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular