Friday, April 18, 2025
Google search engine

Homeರಾಜ್ಯಮಹಾಕುಂಭ ಮೇಳದಲ್ಲಿ ಕಾಲ್ತುಳಿತ :ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಯೋಗಿ ಆದಿತ್ಯನಾಥ್

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ :ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಯೋಗಿ ಆದಿತ್ಯನಾಥ್

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ದುರಂತದಲ್ಲಿ 90ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, 36 ಜನರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಆದಿತ್ಯನಾಥ್ ಅವರು ಕಾಲ್ತುಳಿತ ದುರಂತದ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ನ್ಯಾಯಮೂರ್ತಿ ಹರ್ಷ ಕುಮಾರ್, ಮಾಜಿ ಪೊಲೀಸ್ ಮಹಾ ನಿರ್ದೇಶಕ ವಿ.ಕೆ. ಗುಪ್ತಾ, ಮತ್ತು ನಿವೃತ್ತ ಮೂವರು ಸದಸ್ಯರೊಂದಿಗೆ ಆಯೋಗವನ್ನು ರಚಿಸಲಾಗಿದೆ.

ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಕರ್ನಾಟಕದ ನಾಲ್ವರು, ಅಸ್ಸಾಂನ ಒಬ್ಬ ಮತ್ತು ಗುಜರಾತ್‌ನ ಒಬ್ಬ ಭಕ್ತರೂ ಇದ್ದಾರೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular