ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನ್ಯಾ. ಮೈಕಲ್ ಡಿ. ಕುನ್ಹಾ ನೇತೃತ್ವದ ತನಿಖಾ ಆಯೋಗದ ವರದಿಯನ್ನು ಸಚಿವ ಸಂಪುಟ ಸ್ವೀಕರಿಸಿದ್ದು, ಆರ್ಸಿಬಿಯ ಜೊತೆಗೆ ಕೆಎಸ್ಸಿಎ ವಿರುದ್ಧವೂ ಕ್ರಮಕ್ಕೆ ಒಪ್ಪಿಗೆ ನೀಡಲಾಗಿದೆ.
ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ವರದಿಯಲ್ಲಿ ಪೊಲೀಸ್ ಮತ್ತು ಆಯೋಜಕರ ವೈಫಲ್ಯವನ್ನು ಉಲ್ಲೇಖಿಸಿದ್ದು, ಹೆಚ್ಚಿನ ತನಿಖೆ ಮತ್ತು ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಶಿಫಾರಸು ಮಾಡಲಾಗಿದೆ.