ಭುವನೇಶ್ವರ: ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಉಸಿರುಗಟ್ಟಿ ಓರ್ವ ಭಕ್ತ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಕಾಲ್ತುಳಿತದ ಬಳಿಕ ಸುಮಾರು 300 ಜನರನ್ನ ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂದು ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.