Monday, June 9, 2025
Google search engine

Homeಅಪರಾಧಕಾನೂನುಕಾಲ್ತುಳಿತ ತನಿಖೆ: ಗಾಯಳುಗಳಿಗೆ ನೋಟಿಸ್‌ ನೀಡಿದ ಜಿಲ್ಲಾಧಿಕಾರಿಗಳು: ಜೂನ್ 11ರಂದು ಹಾಜರಾಗಲು ಸೂಚನೆ

ಕಾಲ್ತುಳಿತ ತನಿಖೆ: ಗಾಯಳುಗಳಿಗೆ ನೋಟಿಸ್‌ ನೀಡಿದ ಜಿಲ್ಲಾಧಿಕಾರಿಗಳು: ಜೂನ್ 11ರಂದು ಹಾಜರಾಗಲು ಸೂಚನೆ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ  ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಜೂನ್ 11ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ಈ ದುರಂತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಸರ್ಕಾರ 15 ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಗದೀಶ ಜಿ ಅವರಿಗೆ ಆದೇಶ ನೀಡಿದ್ದಾರೆ. ಗಾಯಾಳುಗಳು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರ ಒಳಗೆ ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಹೇಳಿಕೆ ನೀಡಬೇಕೆಂದು ನೋಟಿಸ್‌ ನಲ್ಲಿ ಸೂಚಿಸಲಾಗಿದೆ.

ನಂತರ, ಜೂನ್ 13ರಂದು ಮೃತರ ಕುಟುಂಬ ಸದಸ್ಯರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಜೂನ್ 4ರಂದು ಕ್ರೀಡಾಂಗಣದಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯ ವಿವರನೀಡುವಂತೆಯೂ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಪತ್ರವನ್ನು ಕಳುಹಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಂಡು, ಅಧಿಕಾರಿಗಳ ವಿಚಾರಣೆ ನಡೆಸಿ ಅಂತಿಮವಾಗಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. ಜಿಲ್ಲಾಧಿಕಾರಿ ಈಗಾಗಲೇ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡಿಎನ್‌ಎ ಈವೆಂಟ್ ಮ್ಯಾನೇಜ್‌ ಮೆಂಟ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಆಡಳಿತ ಮಂಡಳಿಯ ಪದಾಧಿಕಾರಿಗಳ ಹೇಳಿಕೆಗಳನ್ನೂ ಸಹ ದಾಖಲಿಸಲಾಗುತ್ತದೆ.

ಈಗಾಗಲೇ ಬಂಧಿಸಲ್ಪಟ್ಟಿರುವ ಆರ್‌ ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, . ಡಿಎನ್‌ಎ ಈವೆಂಟ್ ಮ್ಯಾನೇಜ್‌ ಮೆಂಟ್‌ ನ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

RELATED ARTICLES
- Advertisment -
Google search engine

Most Popular