ಇದೇ ಜುಲೈ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್(State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 194 FLC ಕೌನ್ಸೆಲರ್, FLC ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ. ಇದೇ ಜುಲೈ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆ | FLC ಕೌನ್ಸೆಲರ್, FLC ಡೈರೆಕ್ಟರ್ |
ವಿದ್ಯಾರ್ಹತೆ | ನೋಟಿಫಿಕೇಶನ್ ಪರಿಶೀಲಿಸಿ |
ಒಟ್ಟು ಹುದ್ದೆ | 194 |
ವೇತನ | 35,000- 60,000 (ತಿಂಗಳಿಗೆ) |
ಉದ್ಯೋಗದ ಸ್ಥಳ | ಭಾರತ (ಬೆಂಗಳೂರು ಸೇರಿ) |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜುಲೈ 6, 2023 |
ವೇತನ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 35,000- 60,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ:
FLC ಕೌನ್ಸೆಲರ್- 182
FLC ಡೈರೆಕ್ಟರ್- 12
ಗಮನಿಸಿ: ಬೆಂಗಳೂರಿನಲ್ಲಿ 1 FLC ಡೈರೆಕ್ಟರ್ ಹುದ್ದೆ ಹಾಗೂ 19 FLC ಕೌನ್ಸೆಲರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ವಯೋಮಿತಿ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 15, 2023ಕ್ಕೆ ಕನಿಷ್ಠ 60 ರಿಂದ ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟಿಂಗ್, ಮೆರಿಟ್ ಲಿಸ್ಟ್ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇನ್ನೂ ಹೆಚ್ಚಿನ ವಿವರಗಳಿಗಾಗಿ SBI ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 6, 2023