Thursday, April 3, 2025
Google search engine

Homeರಾಜ್ಯರಾಜ್ಯ ಸರ್ಕಾರದಿಂದ ಅಂಗವಿಕಲರಿಗೆ ವಿಮೆ ಮೊತ್ತ 5 ಲಕ್ಷ ರೂ.ಗೆ ಏರಿಕೆ

ರಾಜ್ಯ ಸರ್ಕಾರದಿಂದ ಅಂಗವಿಕಲರಿಗೆ ವಿಮೆ ಮೊತ್ತ 5 ಲಕ್ಷ ರೂ.ಗೆ ಏರಿಕೆ

ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ 1 ಲಕ್ಷದವರೆಗೆ ವಿಮೆ ಸೌಲಭ್ಯವಿದೆ. 1 ವರ್ಷಕ್ಕೆ 1 ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ 5 ಲಕ್ಷಕ್ಕೆ ವಿಮೆ ಮೊತ್ತ ಏರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಪರಿಷತ್ ನಲ್ಲಿ ಎಲ್ಲ ರೀತಿಯ ಅಂಗವೈಕಲ್ಯ ಒಳಗೊಂಡ ವಿಮೆ ಯೋಜನೆಗಳಿವೆಯೇ? ವಿಶೇಷವೇತನರಿಗೆ ಯಾವ ರೀತಿಯ ಸೌಲಭ್ಯಗಳಿವೆ ಎಂದು ವೈ.ಎಂ ಸತೀಶ ಪ್ರಶ್ನಿಸಿದರು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿದ್ದು ಅಂಗವಿಕಲತಾ ನಿವಾರಣ ವೈದ್ಯಕೀಯ ಪರಿಹಾರ ನಿಧಿ ಹಾಗು ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ವಿಮೆ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಎಂದು ಇದೆ ವೇಳೆ ವೈ.ಎಂ ಸತೀಶ್ ಕೇಳಿದಾಗ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ 1 ಲಕ್ಷದವರೆಗೆ ವಿಮೆ ಸೌಲಭ್ಯವಿದೆ. 1 ವರ್ಷಕ್ಕೆ 1 ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ 5 ಲಕ್ಷಕ್ಕೆ ವಿಮೆ ಮೊತ್ತ ಏರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

RELATED ARTICLES
- Advertisment -
Google search engine

Most Popular