ಮದ್ದೂರು: ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ಹೊರಟ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ತಾಲೂಕು ಕಚೇರಿ ಬಳಿ ತೆರಳಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆಗಾರರು ರಾಜ್ಯ ಸರ್ಕಾರ ಎಸ್ ಸಿ ಎಸ್ ಟಿ ಗೆ ಮೀಸಲಿದ್ದ ಸುಮಾರು ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ವಿದ್ಯಾರ್ಥಿಗಳಿಗೆ ಮೀಸಲಿದ್ದ ಪ್ರೋತ್ಸಾಹ ಧನವನ್ನ ಕೂಡ ಅನ್ಯ ಕಾರಣಗಳಿಗೆ ಸರ್ಕಾರ ಬಳಸಿಕೊಂಡು ಎಸ್ಟಿ, ಎಸ್ ಸಿ ಜನಾಂಗಕ್ಕೆ ಅನ್ಯಾಯ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಆಯೋಗ ಶೀಘ್ರ ಕ್ರಮ ವಹಿಸಬೇಕು ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮದ್ದೂರು ತಾಹಸಿಲ್ದಾರ್ ಸೋಮಶೇಖರ್ ರವರು ಪ್ರಭಾವಿಗಳ ಒತ್ತಡಕ್ಕೆ ಮಣಿದು ಎಸ್ ಸಿ ಸಮುದಾಯಕ್ಕೆ ಸೇರಿದ ಮಂಜುನಾಥ್ ಎಂಬುವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಪುರಸಭೆಯ 5ಕುಂಟೆ ಗ್ರಾಮ ಠಾಣಾಯನ್ನು ನಿಯಮಾನುಸಾರ ಸರ್ಕಾರಕ್ಕೆ ಕಿಮ್ಮತ್ತು ಕಟ್ಟಿ ತಮ್ಮ ಹೆಸರಿಗೆ ಖಾತೆ ಮಾಡಿಕೊಂಡಿದ್ದರು ಕೂಡ ತಹಸೀಲ್ದಾರ್ ಸೋಮಶೇಖರ್ ರವರು ಪ್ರಭಾವಿಗಳ ಒತ್ತಡಕ್ಕೆ ಸಿಲುಕಿ ಪೊಲೀಸರನ್ನು ಬಳಸಿಕೊಂಡು ಜಮೀನಿನ ಸರ್ವೆ ಕಾರ್ಯ ನಡೆಸಿ ಅನ್ಯಾಯ ಮಾಡುತ್ತಿದ್ದಾರೆ.
ಈ ಕೂಡಲೇ ತಹಶೀಲ್ದಾರ್ ಸೋಮಶೇಖರನ್ನ ಎಸ್ ಟಿ, ಎಸ್‌ಸಿ ಕಾಯ್ದೆ ಅನ್ವಯ ಅಮಾನತುಗೊಳಿಸಬೇಕು ಎಂದು ದಲಿತ ಸಂಘಟನೆಯ ಮುಖಂಡ ಅನ್ನದಾನಿ ಸೋಮನಹಳ್ಳಿ ಒತ್ತಾಯಿಸಿದರು.