Friday, April 11, 2025
Google search engine

Homeರಾಜ್ಯಹುಕ್ಕಾ ಬಾರ್‌ ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ: ಗೃಹ ಸಚಿವ ಜಿ ಪರಮೇಶ್ವರ

ಹುಕ್ಕಾ ಬಾರ್‌ ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ: ಗೃಹ ಸಚಿವ ಜಿ ಪರಮೇಶ್ವರ

ಬೆಳಗಾವಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಹುಕ್ಕಾ ಬಾರ್‌ ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾಡಲು ಸಾಧ್ಯವಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ.

‘ಹುಕ್ಕಾ ಬಾರ್ ನಡೆಸಲು ಪರವಾನಗಿ ನೀಡುವ ಅಧಿಕಾರ ಬಿಬಿಎಂಪಿಗೆ ಇಲ್ಲ. ನಾವು ಮೊದಲೇ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೇವೆ, ಆದರೆ ಸಾಧ್ಯವಾಗಲಿಲ್ಲ. ಆಹಾರ ಸುರಕ್ಷತಾ ಇಲಾಖೆಯು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ನ್ಯಾಯಾಲಯದ ಆದೇಶವು ಹುಕ್ಕಾ ಬಾರ್‌ ಗಳಿಗೆ ಯಾವುದೇ ಪರವಾನಗಿ ಅಗತ್ಯವಿಲ್ಲ ಎಂದು ಹೇಳುತ್ತದೆ. ನ್ಯಾಯಾಲಯಗಳ ಪ್ರಕಾರ, ನಿರ್ವಾಹಕರು ತಮ್ಮ ಆವರಣದಲ್ಲಿ ಹುಕ್ಕಾವನ್ನು ಬಳಸಬಹುದಾದ ಪ್ರತ್ಯೇಕ ಕೋಣೆಗಳನ್ನು ಹೊಂದಿರಬೇಕು ಎಂದು ಅವರು ಹೇಳಿದ್ದಾರೆ.

ಹುಕ್ಕಾ ಬಾರ್ ​ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್ ​ಗಳು ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಅವರಿಗೆ ಲೈಸೆನ್ಸ್ ಯಾರು ಕೊಟ್ಟಿದ್ದಾರೆ, ಹೇಗೆ ಪಡೆದರು ಎಂಬುದು ನಮಗೆ ಅರ್ಥವಾಗುತ್ತಿಲ್ಲ  ಎಂದ ಅವರು, ಇತ್ತೀಚೆಗೆ ಹುಕ್ಕಾ ಬಾರ್‌ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆಯನ್ನು ಪ್ರಸ್ತಾಪಿಸಿದ್ದಾರೆ.

ಅಗ್ನಿ ಅವಘಡದ ಬಗ್ಗೆ ಮಾಹಿತಿ ಇದೆ ಎಂದ ಪರಮೇಶ್ವರ, ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಕಾನೂನು ತರಲಿದೆ ಎಂದಿದ್ದಾರೆ. ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್‌ಕುಮಾರ್‌ ಕೂಡ ಚರ್ಚೆಗೆ ಧ್ವನಿಗೂಡಿಸಿ, ನಗರದಲ್ಲಿ ಹುಕ್ಕಾ ಬಾರ್‌ ಗಳು ಮಾರಕವಾಗುತ್ತಿವೆ. ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ ಗಢ, ತಮಿಳುನಾಡು ಮತ್ತು ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳು ಹುಕ್ಕಾ ಬಾರ್‌ ಗಳನ್ನು ನಿಷೇಧಿಸಿವೆ. ನಮ್ಮಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular