ಮದ್ದೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಿ ಜಿಲ್ಲೆಯ ರೈತರು ಬೆಳೆದಿರುವ ಭತ್ತ, ರಾಗಿ, ಕಬ್ಬಿನ ಬೆಳೆಗಳನ್ನು ಸೇರಿದಂತೆ ಹಲವಾರು ಬೆಳೆಗಳು ಒಣಗುವಂತೆ ಮಾಡಿದ ಕೀರ್ತಿ ರಾಜ್ಯ ಸರ್ಕಾರಕ್ಕೆ ಸಲುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರಿಕಂಠೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಕುಂಟನಹಳ್ಳಿ ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದರು. ಕೆ.ಆರ್.ಎಸ್.ನಲ್ಲಿ 98 ಅಡಿ ನೀರು ಇದ್ದರು ಜಿಲ್ಲೆಯ ರೈತರ ಹಿತ ಮರೆತು ತಮಿಳುನಾಡಿಗೆ ನೀರು ಹರಿಸಿ ರೈತರ ಬೆಳೆಗಳು ಒಣಗುವಂತೆ ಮಾಡಿ ಆತಂಕ ಸಂಕಷ್ಟ ತಂದಿದ್ದಾರೆ ಹಾಗೂ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗುವಂತೆ ಮಾಡಿದ್ದಾರೆಂದು ಸಕರ್ಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ರೈತರ 690 ಕೋಟಿ ರೂ.ಗಳ ಸಾಲ ಮನ್ನಾ ಮಾಡಿ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದರು. ಕುಮಾರಸ್ವಾಮಿ ಅವರನ್ನು ಚುನಾವಣೆಯಲ್ಲಇ ಗೆಲ್ಲಿಸಿದರೆ ಕೇಂದ್ರದಲ್ಲಿ ಕೃಷಿ ಸಚಿವರಾಗಿ, ಜಿಲ್ಲೆಗೆ ಮತ್ತು ರಾಜ್ಯಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಿದ್ದಾರೆಂದು ಆದ್ದರಿಂದ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಅನಗತ್ಯವಾಗಿ ಚೊಂಬಿನ ಜಾಹಿರಾತುಗಳನ್ನು ಪತ್ರಿಕೆಗಳನ್ನು ಜಾಹಿರಾತು ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಬಿದರುಕೋಟೆ ಕುಶ, ಯುವ ಘಟಕದ ಉಪಾಧ್ಯಕ್ಷ ಪ್ರದೀಪ್, ಮುಖಂಡರಾದ ಕೋಣಸಾಲೆ ಮಧು, ಕೌಡ್ಲೆ ರಾಮಣ್ಣ, ನಂಜುಂಡಯ್ಯ, ನಂಜೇಗೌಡ, ಪುಟ್ಟಸ್ವಾಮಿ ಇದ್ದರು.