Friday, April 18, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ತಂಡಕ್ಕೆ ರಾಜ್ಯ ಉಸ್ತುವಾರಿ ಸುರ್ಜೇವಾಲ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ತಂಡಕ್ಕೆ ರಾಜ್ಯ ಉಸ್ತುವಾರಿ ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುನ್ನ, ಸಿಎಂ ಸಿದ್ದರಾಮಯ್ಯ ನೇತೃತ್ವದ ತಂಡಕ್ಕೆ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಎಚ್ಚರಿಕೆ ನೀಡಿದ ಸುದ್ದಿಯು ಸದ್ದು ಮಾಡುತ್ತಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ, ಪವರ್ ಶೇರಿಂಗ್ ಕುರಿತು ಕೆಲ ಸಚಿವರ ಬಹಿರಂಗ ಹೇಳಿಕೆಗಳು ಪಕ್ಷದ ಉನ್ನತ ಮಟ್ಟದಲ್ಲಿ ತೀವ್ರ ಅಸಮಾಧಾನ ಉಂಟುಮಾಡಿದವು. “ಪಕ್ಷವು ಸರ್ಕಾರಕ್ಕಿಂತ ದೊಡ್ಡದು. ಪಕ್ಷ ಇರುವುದೇ ಸರ್ಕಾರ ರಚನೆಗೆ ಆದ್ಯತೆಯಾಗಿದೆ. ಯಾವುದೇ ಕಾರಣಕ್ಕೂ ಬಹಿರಂಗವಾಗಿ ಹೇಳಿಕೆ ನೀಡಬಾರದು,” ಎಂದು ರಣದೀಪ್ ಸುರ್ಜೇವಾಲ ಸಚಿವರಿಗೆ ಎಚ್ಚರಿಕೆ ನೀಡಿದರು.

ಈ ಎಚ್ಚರಿಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ, ಯಾವುದೇ ಸಚಿವರ ಹೆಸರನ್ನು ಪ್ರತ್ಯಕ್ಷವಾಗಿ ಉಲ್ಲೇಖಿಸದೆ ನೀಡಲಾಯಿತು. ಪವರ್ ಶೇರಿಂಗ್ ಸಂಬಂಧಿತ ವಿಷಯಗಳು ಇತ್ತೀಚೆಗೆ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಚರ್ಚೆಗೆ ಕಾರಣವಾಗಿದ್ದು, ಇದರ ಮಧ್ಯೆ ಸುರ್ಜೇವಾಲ ಅವರ ತೀವ್ರ ತಾಕೀತು ಮಹತ್ವ ಪಡೆದಿದೆ. ಕಾಂಗ್ರೆಸ್ ಪಕ್ಷದ ಒಳಜಟಿಲತೆ ಬಗೆಹರಿಸಲು ಮತ್ತು ಸರ್ಕಾರದ ಸ್ಥಿರತೆಯನ್ನು ಕಾಪಾಡುವ ಉದ್ದೇಶದಿಂದ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

RELATED ARTICLES
- Advertisment -
Google search engine

Most Popular