- ಶಂಶೀರ್ ಬುಡೋಳಿ
ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್–9ರ ಸೆಮಿಫೈನಲ್ ಹಾಗೂ ಫೈನಲ್ ಕಾರ್ಯಕ್ರಮವು ಇದೇ ಜನವರಿ 3 ಮತ್ತು 4ರಂದು ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಭವನದಲ್ಲಿ ನಡೆಯಲಿವೆ ಎಂದು ಭಾರತೀಯ ಜೈನ್ ಮಿಲನ್ ವಲಯ–8ರ ಉಪಾಧ್ಯಕ್ಷ ಸುದರ್ಶನ್ ಜೈನ್ ಹೇಳಿದ್ದಾರೆ.
ಅವರು ಗುರುವಾರ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಭಾರತೀಯ ಜೈನ್ ಮಿಲನ್ ವಲಯ–8ರ ಆಶ್ರಯದಲ್ಲಿ ಈ ಬಾರಿ ಮಂಗಳೂರು ಜೈನ್ ಮಿಲನ್ ಆತಿಥೇಯದಲ್ಲಿ ಈ ಭವ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಭಾರತದ ಸಮೃದ್ಧ ಸಾಂಸ್ಕೃತಿಕ ಹಾಗೂ ಅಧ್ಯಾತ್ಮಿಕ ಪರಂಪರೆಯನ್ನು ಜನಸಾಮಾನ್ಯರೊಳಗೆ ಇನ್ನಷ್ಟು ಆಳವಾಗಿ ಬೆಳೆಸುವ ಉದ್ದೇಶದಿಂದ ಜಿನ ಭಜನಾ ಸ್ಪರ್ಧೆ ಸೀಸನ್–9ನ್ನು ಆಯೋಜಿಸಲಾಗಿದ್ದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಭಾರತೀಯ ಜೈನ್ ಮಿಲನ್ ವಲಯ–8ರ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್ ಮಾತನಾಡಿದರು. ಮಂಗಳೂರು ಜೈನ್ ಮಿಲನ್ ಅಧ್ಯಕ್ಷ ರತ್ನಾಕರ್ ಜೈನ್, ಕಾರ್ಯದರ್ಶಿ ವೈಶಾಲಿ ಪಡಿವಾಳ್ ಉಪಸ್ಥಿತರಿದ್ದರು.
ಕೋಶಾಧಿಕಾರಿ ಪ್ರಿಯ ಸುದೇಶ್ ಧನ್ಯವಾದ ಸಮರ್ಪಿಸಿದರು.



