Saturday, April 19, 2025
Google search engine

Homeರಾಜ್ಯರಾಜ್ಯ ಮಟ್ಟದ ಕೆ.ವಿ. ಶಂಕರಗೌಡ, ಕೆ.ಎಸ್. ಸಚ್ಚಿದಾನಂದ ರಂಗಭೂಮಿ ಮತ್ತು ಸಮಾಜಸೇವಾ ಪ್ರಶಸ್ತಿ ಪ್ರದಾನ

ರಾಜ್ಯ ಮಟ್ಟದ ಕೆ.ವಿ. ಶಂಕರಗೌಡ, ಕೆ.ಎಸ್. ಸಚ್ಚಿದಾನಂದ ರಂಗಭೂಮಿ ಮತ್ತು ಸಮಾಜಸೇವಾ ಪ್ರಶಸ್ತಿ ಪ್ರದಾನ

ಮಂಡ್ಯ: ನಿತ್ಯ ಸಚಿವ ಕೆ.ವಿ.ಶಂಕರಗೌಡರ 109ನೇ ಜನ್ಮದಿನಾಚರಣೆ ಹಿನ್ನಲೆ ರಾಜ್ಯ ಮಟ್ಟದ ಕೆ.ವಿ. ಶಂಕರಗೌಡ ಮತ್ತು ಕೆ.ಎಸ್. ಸಚ್ಚಿದಾನಂದ ರಂಗಭೂಮಿ ಮತ್ತು ಸಮಾಜಸೇವಾ ಪ್ರಶಸ್ತಿಗಳ ಪ್ರದಾನ ಸಮಾರಂಭ ನಡೆಯಿತು.

ಜನತಾ ಶಿಕ್ಷಣ ಟ್ರಸ್ಟ್  ವತಿಯಿಂದ ನಿತ್ಯ ಸಚಿವ ಕೆ.ವಿ. ಶಂಕರ ಗೌಡ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಟ್ರಸ್ಟ್ ಅಧ್ಯಕ್ಷ ವಿಜಯಾನಂದ್ ಉದ್ಘಾಟಿಸಿದರು.

ಬಳಿಕ ನಿತ್ಯ ಸಚಿವ  ಕೆ.ವಿ.ಶಂಕರಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ರಂಗಭೂಮಿ ಪ್ರಶಸ್ತಿ ಪುರಸ್ಕೃತರಾದ ಡಾ.ರಾಜಪ್ಪ ದಳವಾಯಿ ಹಾಗೂ ರಾಜ್ಯ ಮಟ್ಟದ ಸಮಾಜಸೇವಾ ಪ್ರಶಸ್ತಿ ಪುರಸ್ಕೃತರಾದ ಡಾ. ಟಿಪ್ಪು ಸುಲ್ತಾನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಯಾವುದೇ ವ್ಯಕ್ತಿಯ ಹಿಂದೆ ಶೂನ್ಯ ಸಾಧನೆ ಇರುವುದಿಲ್ಲ. ಅಂತಹ ವ್ಯಕ್ತಿಗಳ ತತ್ವ ಆದರ್ಶ ಮೈಗೂಡಿಸಿಕೊಂಡು ಸಾಧನೆ ಮಾಡಬಹುದು ಎಂದು ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯಾನಂದ ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಶಿವಪ್ರಸಾದ್ , ಡಾ.ರಾಮಲಿಂಗಯ್ಯ ಹಾಜರಿದ್ದರು.

RELATED ARTICLES
- Advertisment -
Google search engine

Most Popular