ಚಿತ್ರದುರ್ಗ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಸೆಪ್ಟೆಂಬರ್ 03 ಮತ್ತು 04ರಂದು ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ಸೆ.03ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಬೆಳಿಗ್ಗೆ 10.30ಕ್ಕೆ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಅವರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದಲ್ಲಿರುವ ಅಲ್ಪಸಂಖ್ಯಾತರ ವಸತಿ ನಿಲಯ, ಸರ್ಕಾರಿ ಉರ್ದು ಶಾಲೆಗಳಿಗೆ ಭೇಟಿ, ಕೊಳಚೆ ಪ್ರದೇಶ, ಕಾಲೋನಿ ಅಭಿವೃದ್ಧಿ ಮತ್ತು ಇತರೆ ಕಾಮಗಾರಿಗಳ ಪರಿಶೀಲನೆ ನಡೆಸುವರು. ಮಧ್ಯಾಹ್ನ 3.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೈಸ್ಥರು, ಜೈನ್, ಬೌದ್ಧರು, ಸಿಖ್ ಮತ್ತು ಪಾರ್ಸಿ ಸಮುದಾಯ ಪ್ರಮುಖರೊಂದಿಗೆ ಸಮಾಲೋಚನೆ ಹಾಗೂ ಕುಂದು ಕೊರತೆ ಅರ್ಜಿ ಸ್ವೀಕರಿಸುವುದು. ನಂತರ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.
ಸೆ.04ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರಿ ಶಾಲೆಗಳಿಗೆ ಭೇಟಿ, ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಸಂಜೆ 5ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.