ಬಳ್ಳಾರಿ: ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು. ನಗರದ ಡಾ. ರಾಜ್‌ಕುಮಾರ್ ರಸ್ತೆ ಮುನ್ಸಿಪಲ್ ಕಾಲೇಜು ಮೈದಾನದ ಪಕ್ಕ ಬಾಸ್ಕೆಟ್‌ಬಾಲ್ ಮೈದಾನಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಅಂದಾಜು 9.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅತ್ಯಾಧುನಿಕ ಕ್ರೀಡಾ ಸಂಕೀರ್ಣ, ಜಿಮ್ ಕಟ್ಟಡ ಕಾಮಗಾರಿಗೆ ಗಣ್ಯರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಯುವಕರು, ಹಿರಿಯರು ಮತ್ತು ಮಹಿಳೆಯರಿಗಾಗಿ ಜಿಲ್ಲೆಯಲ್ಲಿ ಅತ್ಯಾಧುನಿಕ ವ್ಯಾಯಾಮ (ಜಿಮ್) ಕಟ್ಟಡ ನಿರ್ಮಿಸಲಾಗುವುದು.
ಆಧುನಿಕ ಉಪಕರಣಗಳು ಸೇರಿದಂತೆ ವಿಶೇಷ ಸೌಲಭ್ಯಗಳು ಇರುತ್ತವೆ ಎಂದು ಮಾಹಿತಿ ನೀಡಿದರು. ಈ ವೇಳೆ ಬಳ್ಳಾರಿ ನಗರ ಶಾಸಕ ನರ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಬಿ. ಬಿಳಿನೆ, ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ಹಿರಿಯ ಅಧಿಕಾರಿ ರಂಜಿತ್ ಕುಮಾರ್ ಬಂದಾರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ತಹಸೀಲ್ದಾರ್ ಗುರುರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ. ಅಧಿಕಾರಿಗಳು, ಪಾಲಿಕೆ ಸದಸ್ಯರು, ಪ್ರತಿನಿಧಿಗಳು. ಜನರ ಮತ್ತು ಗ್ರೇಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.