Friday, April 11, 2025
Google search engine

Homeಅಪರಾಧಕಾನೂನುಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ

ಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ

ನವದೆಹಲಿ: ದೇಶದ ಜೈಲುಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ, ಈ ತಾರತಮ್ಯವನ್ನು ಸಹಿಸಲಾಗುವುದಿಲ್ಲ. ಒಂದು ವೇಳೆ ಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.

ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ‘ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಸಮಾನವಾಗಿ ಪರಿಗಣಿಸಬೇಕು’ ಎಂದು ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯ ಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠವು ವಿಚಾರಣೆ ನಡೆಸಿ,ಜೈಲು ನಿಯಮಗಳ ಪ್ರಕಾರ, ಕೆಳವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಕೈದಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸುಕನ್ಯಾ ಶಾಂತ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ರಾಜ್ಯಗಳ ಜೈಲು ಕೈಪಿಡಿಗಳು ತಮ್ಮ ಜೈಲುಗಳಲ್ಲಿನ ಕೆಲಸದ ಹಂಚಿಕೆಯಲ್ಲಿ ತಾರತಮ್ಯವನ್ನು ತೋರಿಸುತ್ತವೆ ಮತ್ತು ಕೈದಿಗಳ ಜಾತಿಯ ಆಧಾರದ ಮೇಲೆ ಅವರಿಗೆ ಜೈಲಿನಲ್ಲಿ ಸ್ಥಳವನ್ನು ನೀಡಲಾಗುತ್ತದೆ. ಉದಾಹರಣೆಗೆ ಪಶ್ಚಿಮ ಬಂಗಾಳದ ಜೈಲು ಸಂಹಿತೆಯು ‘ಜಾತಿ ಆಧಾರದ ಮೇಲೆ ಜೈಲಿನಲ್ಲಿ ಕೆಲಸವನ್ನು ನೀಡಬೇಕು. ಅಡುಗೆ ಕೆಲಸವನ್ನು ಉನ್ನತ ಜಾತಿಯವರು ಮಾಡಬೇಕು ಮತ್ತು ಇತರ ಜಾತಿಗಳ ಜನರು ಕಸ ಗುಡಿಸುವಂತಹ ಉಳಿದ ಕೆಲಸಗಳನ್ನು ಮಾಡಬೇಕು’ ಎಂದು ಹೇಳುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದರು.

RELATED ARTICLES
- Advertisment -
Google search engine

Most Popular