Monday, April 7, 2025
Google search engine

Homeರಾಜ್ಯಸುದ್ದಿಜಾಲರಾಜ್ಯಾದ್ಯಂತ ಗ್ಲೋಬಲ್ ಶಾಲೆ ಸ್ಥಾಪನೆ: ಡಿ.ಕೆ. ಶಿವಕುಮಾರ್

ರಾಜ್ಯಾದ್ಯಂತ ಗ್ಲೋಬಲ್ ಶಾಲೆ ಸ್ಥಾಪನೆ: ಡಿ.ಕೆ. ಶಿವಕುಮಾರ್

ರಾಮನಗರ:ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬೇಕು ಎಂದರೆ ಅವನ ಹಿಂದೆ ಪ್ರಮುಖ ಪಾತ್ರ ವಹಿಸುವುದು ಒಬ್ಬ ಗುರು. ಪ್ರತಿಯೊಬ್ಬರಿಗೂ ಶಿಕ್ಷಣ ಹೇಗೆ ಮುಖ್ಯವೋ, ಹಾಗೇಯೆ ಆ ಶಿಕ್ಷಣ ನೀಡುವ ಗುರುವು ಅಷ್ಟೇ ಮುಖ್ಯ ಎಂದು ಉಪಮುಖ್ಯಮಂತ್ರಿಗಳು, ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರ ಅಭಿವೃದ್ಧಿ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅವರು ಇಂದು ಕನಕಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಡೀ ರಾಜ್ಯದಲ್ಲೇ ಹಳ್ಳಿ ಮಕ್ಕಳಿಗೆ ನ್ಯಾಷನಲ್ ಗ್ಲೋಬಲ್ ಶಿಕ್ಷಣವನ್ನು ನೀಡಲು ಒಂದು ವಿಷಯವನ್ನು ಸಿದ್ದಪಡಿಸಲಾಗುತ್ತಿದೆ. ಎರಡರಿಂದ ಮೂರು ಪಂಚಾಯಿತಿಗೆ ಎರಡರಿಂದ ಮೂರು ಎಕರೆ ಜಾಗವನ್ನು ಗುರುತಿಸಿ, ಈಗಿರುವ ಶಿಕ್ಷಕರಿಗೆ ಗ್ಲೋಬಲ್ ಶಿಕ್ಷಣದ ಕುರಿತು ಮಾರ್ಗದರ್ಶನಗಳನ್ನು ನೀಡಿ ಸಿಬಿಎಸ್‌ಸಿ ಅಥವಾ ಐಸಿಎಸ್‌ಸಿ ಮಾದರಿಯ ಶಾಲೆಯನ್ನು ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಬ್ಲೂ ಪ್ರಿಂಟ್ ಸಹ ಸಿದ್ದಪಡಿಸಲಾಗಿದೆ ಎಂದರು.

ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಅವರು ವ್ಯಕ್ತಿಯ ಆತ್ಮ ವಿಶ್ವಾಸ, ಬದಕನ್ನು ಬಲಪಡಿಸುತ್ತಾರೆ. ಜೀವನದ ಪ್ರತಿಯೊಂದು ತಪ್ಪು, ಒಪ್ಪುಗಳನ್ನು ತಿದ್ದಿ ತೀಡಿ ಮತ್ತು ಜವಬ್ದಾರಿಯ ಬಗ್ಗೆ ಕಲಿಸಿ ಕೊಡುತ್ತಾರೆ. ವಿದ್ಯಾರ್ಥಿಗಳ ಜೀವನ ಎಂದಿಗೂ ಹಸನಾಗಿರಲಿ ಎಂದು ತುಂಬು ಹೃದಯದಿಂದ ಹಾರೈಸಿ, ಅದಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತಾರೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ವ್ಯವಸ್ಥೆಗಳು ಬಹಳ ಮುಖ್ಯವಾಗಿರುತ್ತದೆ. ಶಿಕ್ಷಕರು ಮಕ್ಕಳ ಭವಿಷ್ಯವನ್ನು ಚೆನ್ನಾಗಿ ರೂಪಿಸಬೇಕು. ಸಮಾಜದಲ್ಲಿ ರೈತರು ನೀಡುವ ಅನ್ನ, ಮತದಾರರು ನೀಡುವ ಮತ, ಗುರುಗಳು ಕಲಿಸುವ ಅಕ್ಷರ, ತಾಯಿ ಮಾಡುವ ಆಶೀರ್ವಾದ ಇವೆಲ್ಲವೂ ವಿಶೇಷವಾದಂತಹವು ಆದ್ದರಿಂದ ನಾವು ಎಲ್ಲರಿಗೂ ಗೌರವ ಕೊಡಬೇಕು ಎಂದರು.

ಮಕ್ಕಳ ಭವಿಷ್ಯವನ್ನು ಶಿಕ್ಷಕರು ತೀರ್ಮಾನಿಸುತ್ತಾರೆ. ಶಿಕ್ಷಕರು ಅಂತರಾಷ್ಟಿಯ ಮಟ್ಟದಲ್ಲಿ ಮಕ್ಕಳು ಸ್ಪರ್ಧಿಸುವಂತೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್, ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳನ್ನು ಹೆಚ್ಚು ಬಳಸುತ್ತಿದ್ದಾರೆ. ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಭಾರತದ ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ನಾವು ಶ್ರಮಪಡಬೇಕು ಎಂದರು.

ಶಿಕ್ಷಕರು ಮಕ್ಕಳನ್ನು ಬದಲಾವಣೆ ಮಾಡಬೇಕು. ಶಿಕ್ಷಕರು ನೀಡುವ ಅವಕಾಶದಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ. ಆದ್ದರಿಂದ ಮಕ್ಕಳ ಭವಿಷ್ಯವನ್ನು ಶಿಕ್ಷಕರು ಉತ್ತಮವಾಗಿ ರೂಪಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಎಸ್. ರವಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಲ್ಲಾ ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರರಾದ ಸ್ಮಿತಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular