ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನೆಲ್ಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇಂದಿನಿಂದ ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದ್ದು, ಸಾರಿಗೆ ನೌಕರರ ರಜೆ ರದ್ದು ಮಾಡಿದ ಇಲಾಖೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ ಸಾರಿಗೆ ನೌಕರರಿಗೆ ಯಾವುದೇ ರಜೆ ಇರುವುದಿಲ್ಲ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಜೆ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.