ಚಿತ್ರದುರ್ಗ: ಮದ್ಯ, ಮಾದಕ ವ್ಯಸನಗಳಿಂದ ದೂರವಿದ್ದು, ವ್ಯಸನಮುಕ್ತ, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಿಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣದಿಂದ ಅಭಿವೃದ್ಧಿಯನ್ನೂ ಕಾಣಲು ಸಾಧ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯಲ್ಲಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಮದ್ಯಪಾನ ಹಾಗೂ ತಂಬಾಕಿನ ವ್ಯಸನಗಳಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಆರೋಗ್ಯ ಹಾಳು ಮಾಡಿಕೊಳ್ಳುವುದರ ಜೊತೆಗೆ ಪ್ರಾಣಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಆ ಕಾರಣಕ್ಕಾಗಿ ವ್ಯಸನಗಳ ದಾಸರಾಗದೇ ನಾವೆಲ್ಲರೂ ಸೇರಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಮುಂದಾಗೋಣ ಎಂದು ಸಲಹೆ ನೀಡಿದರು.
ಒಂದು ಕುಟುಂಬದಲ್ಲಿ ಬಬ್ಬ ವ್ಯಕ್ತಿ ಕುಡಿತದ ಚಟಕ್ಕೆ ಬಲಿಯಾದರೆ ಇಡೀ ಕುಟುಂಬವೇ ಹಾಳಾಗುತ್ತದೆ. ಈ ನಿಟ್ಟಿನಲ್ಲಿ ವ್ಯಸನಮುಕ್ತ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಮೊದಲು ನಾವುಗಳು ಇಂದಿನಿಂದಲೇ ಪರಿವರ್ತನೆಯಾಗಬೇಕು. ಪೋಷಕ ಜೀವನಶೈಲಿ, ವರ್ತನೆಗಳು ತಮ್ಮ ಮಕ್ಕಳಿಗೆ ಮಾದರಿಯಾಗಿರಬೇಕು. ಪೋಷಕರು, ಶಿಕ್ಷಕರು, ತಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದರೆ ಮಕ್ಕಳು ಚೆನ್ನಾಗಿ ಬೆಳೆಯಲು ಸಾಧ್ಯ. ತಮ್ಮೊಂದಿಗೆ ಕುಟುಂಬ ಮತ್ತು ಪರಿಸರವನ್ನು ವ್ಯಸನಮುಕ್ತಗೊಳಿಸಲು ಬದ್ಧರಾಗೋಣ ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಮಾತನಾಡಿ, ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ದುವ್ರ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭೀಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ. ಮಹಾಂತ ಶಿವಯೋಗಿಗಳು ಶ್ರಮಿಸಿದ್ದಾರೆ ಎಂದರು.
ಮಹಾಂತ ಶಿವಯೋಗಿಗಳು ವ್ಯಸನಮುಕ್ತ ವ್ಯಕ್ತಿ-ಕುಟುಂಬ-ಸಮಾಜ-ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಡಿಯಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ, ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾಗದಂತೆ ಅರಿವು ಮೂಡಿಸುತ್ತಿದ್ದರು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಅವರು ಮದ್ಯಪಾನ,
ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಬಾಬುರತ್ನ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಕೃಷಿ ಇಲಾಖೆಯ ನಟರಾಜ್, ತೂಕ ಮತ್ತು ಅಳತೆ ಇಲಾಖೆಯ ಗುರುಪ್ರಸಾದ್, ರಾಗ್ಯಾನಾಯ್ಕ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಗದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪಿ.ಎಂ.ವೇಣುಗೋಪಾಲ್, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳು ಇದ್ದರು.