ಬಳ್ಳಾರಿ: ಜಿಲ್ಲೆಯಲ್ಲಿ ಒಂದೂವರೆ ತಿಂಗಳ ಮಗುವೊಂದು ಕಳ್ಳತನವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿಯೇ ಪರಿಗಣಿಸಿದಂತ ಪೊಲೀಸರು, ಒಂದೇ ದಿನದಲ್ಲಿ ಬೇಧಿಸಿ, ತಾಯಿಯ ಮಡಿಲಿಗೆ ಒಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಳ್ಳಾರಿಯ ಬ್ರೂಸಪೇಟೆ ಠಾಣೆ ವ್ಯಾಪ್ತಿಯಲ್ಲಿ ಒಂದೂವರೆ ತಿಂಗಳ ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಬೇಧಿಸಿರುವಂತ ಪೊಲೀಸರು, ಕಳ್ಳತನ ನಡೆ ಕೇವಲ 12 ಗಂಟೆಯ ಒಳಗಾಗಿ ಮಗುವನ್ನು ಪತ್ತೆ ಹಚ್ಚಿ, ರಕ್ಷಿಸಿದ್ದಾರೆ. ಆ ಬಳಿಕ ಮಗುವನ್ನು ತಾಯಿಯ ಮಡಿಲು ಸೇರಿಸಿ್ದದಾರೆ.
ಈ ಪ್ರಕರಣ ಸಂಬಂಧ ಆರೋಪಿಗಳಾದಂತ ಶಮೀಮ್(25), ಹೆಚ್.ಎಂ ಇಸ್ಮಾಯಿಲ್ ಸಾಬ್(65), ಭಾಷಾ (55) ಮತ್ತು ಬಸವರಾಜ ಮಹಾಂತಪ್ಪ (43) ಎಂಬುವರನ್ನು ಬಂಧಿಸಿದ್ದಾರೆ. ಬ್ರೂಸ್ ಪೇಟೆ ಠಾಣೆಯ ಪೊಲೀಸರ ಈ ಕಾರ್ಯವನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಶ್ಲಾಘಿಸಿದ್ದಾರೆ.